ಬರಿಯ ಮಣ್ಣ ಹಣತೆ ನಾನು

ಬರಿಯ ಮಣ್ಣ ಹಣತೆ ನಾನು
ಅದರ ಜ್ಯೋತಿ ಪ್ರಕಾಶಕನು ನೀನು|
ನಿನ್ನ ಕಾಂತಿಯ ಕರುಣೆ ಬೆಳಕಲಿ
ಕಾಣಿಸುತ್ತಿರುವೆನು ನಾನು||

ನೀನು ಬೆಳೆಗುವವರೆಗೂ
ನಾನು ಮಿನುಗುವೆನು|
ನೀನು ಹೊಳೆಹೊಳೇದಂತೆ
ನಾನು ಹೊಳೆಯುವೆನು|
ನಿನ್ನಿಂದಲೆನ್ನ ತಮವ ತೊಳೆವೆನು||

ನಿನ್ನ ದಯೆಯಿಂದಲಿ ಮಣ್ಣ ಹಣತೆಯಿಂದ
ಪ್ರಣತೆಯಾಗಿರುವೆ ನಾನು|
ನಿನ್ನ ದಯಾಮಹಿಮೆ ಸದಾ ಇರಲಿ ಹೀಗೆ
ಪ್ರತಿಫಲಿಸುವೆನು ತುಂಬುಚಂದ್ರಮನಂತೆ
ನಿನ್ನೀ ಒಂದು ಬ್ರಹ್ಮಾಂಡದೊಳಗೆ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಣುಬಾಂಬು
Next post ನಿತ್ಯ ಪೂಜೆ

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…