ಓ ಮಕ್ಕಳೆ

ಓ ಮಕ್ಕಳೆ
ಚೆಲುವಿನ ನಲಿವಿನ
ಹೂವುಗಳೆ ||

ಇಂದಿನ ಮಕ್ಕಳೆ ನೀವು
ಮುಂದಿನ ಪ್ರಜೆಗಳೆ ನೀವು
ಅಂಧಕಾರದೆ ದೀಪ ಹಚ್ಚಿ
ಹಣತೆಯ ಕಿರಣಗಳಾಗಿರಿ ||

ಒಂದೇ ತಾಯ ಮಕ್ಕಳೆಂದು
ಒಂದೇ ಕೊಂಬೆ ಹೂಗಳೆಂದು
ಹಲವು ಮರಗಳು ಬೇರೆಯಾದರೇನು
ಹಸಿರು ಒಂದೇ ಉಸಿರು ಎನ್ನಿರಿ ||

ಅಣ್ಣ ತಮ್ಮ ಅಕ್ಕ ತಂಗಿ
ಒಂದೇ ವೀಣೆ ನಾಕುತಂತಿ
ಹರಿದ ವೀಣೆಗೆ ಇಲ್ಲ ಶೃತಿಯು
ಸ್ನೇಹ ಭಾವಕೆ ಇಲ್ಲ ವ್ಯಥೆಯು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪರಮಾತ್ಮನ ತೀರ
Next post ಒಂದು ಮೌನದ ನಡುಗೆ

ಸಣ್ಣ ಕತೆ

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…