ಮಳೆ ಸುರಿಯಲಿ ಹೊಳೆ ಹರಿಯಲಿ

ಮಳೆ ಸುರಿಯಲಿ ಹೊಳೆ ಹರಿಯಲಿ
ತಿಳಿಯಾಗಲಿ ಮೋಡ
ಧಗಧಗಿಸುವ ಧರೆ ತಣಿಯಲಿ
ಮನುಜನೆದೆ ಕೂಡ

ಗಿಳಿ ಹಾಡಲಿ ತೆನೆ ತೂಗಲಿ
ಕಾಡಾಗಲಿ ಹಸಿರು
ಬುಸುಗುಟ್ಟುವ ಜಗದೆದೆಯಲಿ
ಹೊಮ್ಮಲಿ ಮೆಲ್ಲುಸಿರು

ರವಿ ಏಳಲಿ ಗಿರಿ ಕಾಣಲಿ
ಮೂಡಲಿ ಮಳೆಬಿಲ್ಲು
ಸೆರೆಯೊಳಗಿನ ಬಣ್ಣಗಳಿಗೆ
ಆಗಲಿ ಹೊಸ ಸೊಲ್ಲು

ಅಲೆ ಏಳಲಿ ಕತೆ ಬರೆಯಲಿ
ಸಾಗರದ ತುಂಬ
ದಡ ಮುಟ್ಟುವ ಪ್ರೀತಿಯಲಿ
ಬದುಕಾಗಲಿ ಬಿಂಬ

ನದಿ ಹಾಡಲಿ ಕಡಲಾಗುವ
ಪದಕೆಟುಕದ ಗೀತೆ
ಸ್ವರವಾಗಲಿ ಎದೆ‌ಎದೆಯೂ
ಮೂಡಲಿ ಹೊಸ ಚರಿತೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಾವು
Next post ಅಕ್ಕ ಮಹಾದೇವಿಯ ಹಾಡು

ಸಣ್ಣ ಕತೆ

 • ತನ್ನೊಳಗಣ ಕಿಚ್ಚು

  ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

 • ಅಪರೂಪದ ಬಾಂಧವ್ಯ

  ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

 • ಮರೀಚಿಕೆ

  ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

 • ಸಿಹಿಸುದ್ದಿ

  ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

 • ರಣಹದ್ದುಗಳು

  ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…