ಭಾವಗೀತೆ

ಭಾವಗೀತೆ ಹಾಡಲೇನು |
ಹೃದಯ ಭಾರ ಇಳಿಸಲೇನು || ಪ ||

ಕುಬ್ಜವಾಗಿ ನಿಂತ ನಾನು
ನೂರು ಕನಸ ಕಂಡೆನು |
ಕನಸನೆಲ್ಲ ಹಿಡಿಯ ಹೋಗಿ
ಬರಿಯ ಶೂನ್ಯ ಕಂಡೆನು ||೧||

ಆಸೆ ಎಂಬ ತೇರನೇರಿ
ದೂರ ದೂರ ಹೋದೆನು |
ನೆನೆಸದಷ್ಟು ದೂರ ಹೋಗಿ
ಗುರಿಯನೆಲ್ಲೂ ಕಾಣೆನು ||೨||

ಕನಸು ಆಸೆ ಎಲ್ಲ ಕಳೆದು
ದುಃಖ ಮಾತ್ರ ಕಂಡೆನು |
ಭಾರವಾದ ಹೃದಯವನ್ನು
ನಿಮ್ಮ ಮುಂದೆ ಇಡುವೆನು ||೩||
*****
೧೦-೦೮-೧೯೭೭

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಾರ್ಥನೆ
Next post ಅಥೆಲೋ ನಾಟಕ ಓದಿ

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

cheap jordans|wholesale air max|wholesale jordans|wholesale jewelry|wholesale jerseys