ಆತ್ಮವಿಶ್ವಾಸ

ಅಂತರಂಗದಾಳದಲಿ
ಮರೆಯಾಗಿ ನಿಂತಿದೆ
ಒಂದು ಬಂಗಾರದ ಎಳೆ
ಅದು ಆತ್ಮವಿಶ್ವಾಸದ ನೆಲೆ.

ಅನುಭವದುರಿಯಲಿ ಬೆಂದು
ಉಕ್ಕಿಹರಿದ ಲಾವಾರಸ ಗಟ್ಟಿಯಾದಾಗ
ಪುಟಕ್ಕಿಟ್ಟ ಬಂಗಾರ,
ಅದೇ ಜೀವನ ಸಾರ.

ಅಂತರಂಗದಾಳದ
ಬಂಗಾರದ ಎಳೆಯೊಳಗೆ
ಬೆಚ್ಚನೆ ಮಲಗಿದೆ ಆತ್ಮವಿಶ್ವಾಸದ ಸೆಲೆ;
ಅದ ಹುಡುಕಿ ಹೊರಗೆಳೆದಾಗ
ಉಕ್ಕುವುದು
ಅಪಕ್ವವ ಪಕ್ವವಾಗಿಸಿ
ಸಾಮಾನ್ಯರ ಅಸಾಮಾನ್ಯರಾಗಿಸಿ
ಅಬಲೆಯರ ಸಬಲೆಯರಾಗಿಸಿ
ಹೇಡಿಯ ಧೀರೆಯಾಗಿಸಿ
ಮೆರೆವ
ಆತ್ಮವಿಶ್ವಾಸದೊಸಗೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾಳಿಗಾಹಾರ ಹೇಗೋ ಹಾಗೆ ನೀ ನನಗೆ
Next post ಉಳಿದ ದಾರಿ

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…