ಹೊಗೆಯ ಗಾಡಿ

ನೊಗವನೆತ್ತಿನ ಕೊರಳೊಳಿಡುವ ಪಾಡಿಲ್ಲ,
ಬಿಗಿದ ಕುದುರೆಯ ಹೂಡುವಾಯಾಸವಿಲ್ಲ,
ಮಿಗೆ ಕಾದ ನೀರ ಹಬೆಯಿಂದ ಬಲು ಬೇಗ
ಹೊಗೆಯ ಗಾಡಿಯು ನೋಡು ಹೋಗುತಿಹುದೀಗ.

ಸೋಲಿಪುದು ಗಾಳಿಯನ್ನು ಬಲು ವೇಗದಿಂದ;
ಮೇಲೆ ಹೊಗೆಯುಗುಳುತಿಹುದೀ ಕೊಳವೆಯಿಂದ;
ಕಾಲಕ್ಕೆ ಸರಿಯಾಗಿ ಹೊರಟು, ಕಂಬಿಗಳ
ಮೇಲೆ ಹರಿದೈದುವುದು ದೂರದೂರಗಳ.

ದಾರಿಯಲಿ ಕಳ್ಳಕಾಕರ ಭೀತಿಯಿಲ್ಲ,
ಮೀರಿ ಬಹ ಮಳೆ ಬಿಸಿಲುಗಳ ಬಾಧೆ ಇಲ್ಲ.
ದೂರ ದೇಶದ ಬೆಳಸನೊಯ್ದು ತರಬಹುದು,
ಯಾರಿಗಿದರುಪಯೋಗಗಳ ಹೊಗಳಲಹುದು ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಮ್ಮಾನ ಸಂಭ್ರಮವಿದೇನು ಸಮ್ಮೋಹನಕೆ?
Next post ಕಥನ ಹಾಗೂ ಪುರಾಣ: ಒಂದು ವಸ್ತುವಿನ ಎರಡು ಮುಖಗಳು

ಸಣ್ಣ ಕತೆ

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…