ದಕ್ಕಿದ ಅವಕಾಶ

ನಾ ಹುಟ್ಟಿ ಬೆಳೆದಂತಹ
ಮಣ್ಣ ಗೋಡೆಯ ಮನೆಯ
ವಿಶಾಲ ಅಂಗಳದಲಿ
ಛಾವಣಿಯೇ ಇಲ್ಲದ
ಹಾಳು ಗೋಡೆಗಳ ಮೇಲೆ
ಬೆಳೆದಿರುವ ಹುಲ್ಲುಗರಿಕೆ-
ದಯಾಮಯ ಅಲ್ಲಾಹ್‌ನ
ಕರುಣೆ ನನ್ನ ಮೇಲಿದೆಯೇನೋ,
ಕತ್ತಲೆಯ ಕೋಣೆಯಲಿ
ಕೈದಿಯಾಗಬೇಕಿದ್ದ ನನಗೆ,
ಛಾವಣಿಯಿಲ್ಲದ ಕೋಣೆಯಿಂದ
ನೀಲ ವಿಶಾಲ ಆಕಾಶ
ನೋಡುವ ಅವಕಾಶ ದಕ್ಕಿತು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇದು ಎಂಥ ಶಾಪ
Next post ಪರಮಹಂಸರಿಗೆ

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…