ನಗುವ ನೀರೆ

ನೆರಿಗೆ ಸೀರೆಯುಟ್ಟ ನಾರಿ
ಚಂದ್ರ ಮೊಗದ ನನ್ನ ಪೋರಿ
ಬಂದು ನಿಲ್ಲು ಒಂದು ಸಾರಿ
ಕೇಳುವೆ ನಾ ನಿನ್ನ ಮಧುರ ವಾಣಿ

ಸುಮದ ಹಾಗೆ ನಿನ್ನ ಮನ
ದುಂಬಿಯಾಗಿ ಗುಣುಗಲೇನು?
ಮಧುವಿನಂತೆ ನಿನ್ನ ತನುವು
ಮಡಿಲಲಿ ಮಲಗಿ ಹೀರಲೇನು?

ಚಂದದಲಿ ನೀನು ಚಂದ
ವರ್ಣಿಸಲಸಾಧ್ಯ ನಿನ್ನ ಅಂದ
ಹಾಕದಿರು ಸಪ್ಪೆ ಮೋರೆ
ನೀನೀಗ ನಗುವ ತಾವರೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಣ್ಣೀರ ಹನಿಯುದುರಿದ್ದಕ್ಕೆ….
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೧೨

ಸಣ್ಣ ಕತೆ

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…