ಕಲಾ-ಮಹಿ

ನಾನು ಊಹಿಸಿರಲಿಲ್ಲ
ನಮ್ಮ ಸ್ನೇಹ ಕೂಡುವುದೆಂದು
ನಾನು ಬಯಸಿರಲಿಲ್ಲ
ಈ ಬಂಧನ ಬೆಸೆಯುವುದೆಂದು

ಮನಸ್ಸುಗಳು ಒಂದಾಗಿ
ಮಧುರತೆಯ ಜೀವವಾಗಿ
ಮಮತೆಯ ಒಡಲಾಗಿ
ಸವಿ ಜೇನ ಋಣಿಯಾಗಿ

ಅದೇನೋ ಆಶ್ಚರ್ಯ
ಎಲ್ಲಿಯದೋ ಸಂಬಂಧ
ಮಾಡಿತ್ತು ಬಿಡಿಸದ ಬಂಧ
ಜನ್ಮ ಜನ್ಮದಾ… ಅನುಬಂಧ

ಅಂದವನೊಲ್ಲೆ, ಐಶ್ವರ್ಯ ನಾನೊಲ್ಲೆ
ಎಲ್ಲವೂ ತೃಣ ಈ ಸ್ನೇಹದಾ ಮುಂದೆ
ನನ್ನಲಿ ನೀನಾಗಿ ನಿನ್ನಲ್ಲೇ ನಾನಾಗಿ
ಇರುವುದು ಜೀವ ಒಂದಾಗಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಈ ಜೀವಂತ ನೆಲದ ಮೇಲೆ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೧೪

ಸಣ್ಣ ಕತೆ

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…