ಕಣ್ಣೀರು

ಸಂತೋಷದ ಕಡಲಲ್ಲಿ
ತೇಲಾಡುತಿರಲು ನಾವು
ನಗುವಿನ ಜೊತೆ ಕಣ್ಣೀರು
ಬರುತಿರಲು ಅದುವೇ
ಆನಂದ ಬಾಷ್ಪ.

ದುಃಖದ ಒಡಲಲ್ಲಿ
ಒದ್ದಾಡುತಿರಲು ನಾವು
ಅಳುವಿನ ಜೊತೆ ಕಣ್ಣೀರು
ಬಾರದಿರಲು ಅದುವೇ
ಮಡುಗಟ್ಟಿದ ಶೋಕ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆತ್ತಲೆ ಮಗುವು
Next post ಮೈಥಿಲಿ

ಸಣ್ಣ ಕತೆ

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…