ವಚನ ವಿಚಾರ – ಅಸಾಧ್ಯ

ವಚನ ವಿಚಾರ – ಅಸಾಧ್ಯ

ಅರಿವಿಂಗೆ ಸಿಕ್ಕದುದ ನೆನೆಯಲಮ್ಮಬಹುದೆ ಅಯ್ಯಾ
ನೆನಹಿಂಗೆ ಬಾರದುದ ಕಾಂಬುದು ಹುಸಿ
ಮುಟ್ಟಿ ಪೂಜಿಸುವ ಮಾತು ಮುನ್ನವೇ ದೂರ
ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ನಿಲ್ಲು ಮಾಣು

[ನೆನೆಯಲಮ್ಮಬಹುದೆ-ಧ್ಯಾನಿಸಲು ಯತ್ನಿಸಬಹುದೆ-ಕಾಂಬುದು-ಕಾಣುವುದು, ಮಾಣು-ಬಿಡು]

ಘಟ್ಟಿವಾಳಯ್ಯನ ವಚನ. ಈ ವಚನ ಅರಿವನ್ನು ಕುರಿತ ನಮ್ಮ ಕಲ್ಪನೆಗಳನ್ನೆಲ್ಲ ಪ್ರಶ್ನಿಸುತ್ತಿದೆ.

ಅರಿವು ಅನ್ನುವುದು ನೆನಪಿಗೆ ಕೂಡ ಸಂಬಂಧಿಸಿದ್ದು ಎಂದುಕೊಂಡಿದ್ದೇವೆ. ನಮ್ಮ ಇಡೀ ಶಿಕ್ಷಣ, ಸಂಸ್ಕೃತಿ ಎಲ್ಲವೂ ನೆನಪಿಗೆ ಸಂಬಂಧಿಸಿದ್ದು, ನೆನಪನ್ನೇ ಆಧರಿಸಿದ್ದು ಅಲ್ಲವೇ? ಆದರೆ ಸತ್ಯ ಅನ್ನುವುದು ಇದ್ದರೆ ಅದು ನೆನಪಿಗೆ ಸಿಲುಕದು. ಅರಿವಿಗೆ ಸಿಲುಕದು. ಅರಿವಿಗೆ ಬಾರದಿರುವ ಸತ್ಯ ನೆನಪಿಗೆ ಬರುತ್ತದೆಯೇ? ನೆನಪಿಗೆ ಬರುವುದೇನಿದ್ದರೂ ನಮ್ಮ ಹಳೆಯ ಅನುಭವ, ಕೇಳಿದ ಮಾತು ಇಂಥವೇ ಅಲ್ಲವೇ? ಯಾವುದು ನಮ್ಮ ನೆನಪಿನಲ್ಲಿ ದಾಖಲಾಗಿದೆಯೋ ಅದನ್ನು ಮಾತ್ರ ನಾವು ಈಗ ಗುರುತಿಸುತ್ತೇವೆ. ಯಾವುದು ನೆನಪಿಗೆ ಬಾರದೋ ಅದು ನಮಗೆ ಕಾಣುವುದೂ ಇಲ್ಲ. ನೆನಪನ್ನೇ ಆಧರಿಸಿಕೊಂಡಿರುವ ನಮ್ಮ ಕಾಣ್ಕೆ, ನಮ್ಮ ಅರಿವು ಸತ್ಯವನ್ನು ಕಾಣಿಸಿಕೊಡಲಾಗದು. ಹೀಗಿರುವಾಗ ಮಾತಿಗೆ ಸಿಲುಕದ, ನೆನಪಿಗೆ ಆಹಾರವಾಗದ ಸತ್ಯವನ್ನೋ ದೇವರನ್ನೋ ಮುಟ್ಟುವುದು ಪೂಜಿಸುವುದು ಅಸಾಧ್ಯ ಅನ್ನುತ್ತಾನೆ ಘಟ್ಟಿವಾಳಯ್ಯ.

ನಡುಗನ್ನಡದಲ್ಲಿ ನೆನೆ ಎಂಬ ಮಾತನ್ನು ಧ್ಯಾನಿಸು ಅನ್ನುವ ಅರ್ಥದಲ್ಲಿ ಬಳಸುವುದುಂಟು. ಧ್ಯಾನಿಸುವುದು ಏನಿದ್ದರೂ ನಮಗೆ ಗೊತ್ತಿರುವ, ನಮ್ಮ ಗ್ರಹಿಕೆಗೆ ಬಂದಿರುವ, ಧ್ಯಾನಿಸಬಲ್ಲ ಸಂಗತಿಗಳನ್ನು ಮಾತ್ರವೇ.

ಇಂಗ್ಲೀಶ್‌ನ ರಿಕಾಗ್ನಿಶನ್ ಎಂಬ ಮಾತು ನೆನೆದುಕೊಳ್ಳೋಣ. ಅದು ರಿ (ಮತ್ತೆ) ಕಾಗ್ನಿಶನ್ (ಗ್ರಹಿಸುವುದು, ಗುರುತಿಸುವುದು). ನಮ್ಮ ಜ್ಞಾನದ ಕಲ್ಪನೆ, ಅರಿವಿನ ಕಲ್ಪನೆ ಎಲ್ಲವೂ ನೆನಪನ್ನು ಮಾತ್ರ ಆಧರಿಸಿದ್ದು, ಅದರಂತೆ ನಾವು ಈ ಮೊದಲು ದೇವರನ್ನು, ಸತ್ಯವನ್ನು ಕಂಡಿಲ್ಲವಾದರೆ, ಕಂಡ ನೆನಪು ನಮ್ಮಲ್ಲಿಲ್ಲವಾದರೆ ಈಗ ಒಂದು ವೇಳೆ ದೇವರು, ಸತ್ಯ ನಮ್ಮ ಕಣ್ಣೆದುರಿಗೇ ಇದ್ದರೂ ಗುರುತಿಸಲಾರೆವು. ಹೀಗಿರುವಾಗ ನಾನು ಸತ್ಯವನ್ನು ಕಂಡೆ, ದೇವರನ್ನು ಕಂಡೆ ಅನ್ನುವ ಮಾತುಗಳೇ ಸರಿಯಲ್ಲ, ಅದು ಅಸಾಧ್ಯ ಅನ್ನುತ್ತಿರುವಂತಿದೆ ಘಟ್ಟಿವಾಳಯ್ಯ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೆಂಪುಗಳ ಹಬ್ಬ
Next post ನೆಮ್ಮದಿಯ ತಾಣ

ಸಣ್ಣ ಕತೆ

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…