ಪುಟ್ಟನ ತೋಟ

ಮನೆಯ ಮುಂದೆ ಒಂದು
ಪುಟ್ಟ ತೋಟ ಮಾಡಿದೆ
ಹೂವು ಹಣ್ಣು ಗಿಡವನೆಟ್ಟು
ಅಂದ ಗೊಳಿಸಿದೆ

ನಿತ್ಯ ನೀರು ಹನಿಸಿ
ನಾನು ಹಸನು ಮಾಡಿದೆ
ಹೂವು ಬಿಟ್ಟು ಕಾಯಿ ಕೊಟ್ಟು
ಗಿಡವು ನಕ್ಕವು

ಪೂಜೆಗೆಂದು ಅಮ್ಮ ಬಂದು
ಹೂವು ಒಯ್ದಳು
ಮುಡಿಯಲಿಕ್ಕೆ ತಂಗಿ ಬಂದು
ಹೂವು ಕಿತ್ತಳು.

ಬಣ್ಣ ಬಣ್ಣ ಚಿಟ್ಟೆಗಳು
ಹಾರಿ ಬಂದವು
ಬಾಯಿತುಂಬ ಮಧುವ ಹೀರಿ
ಖುಷಿಯಪಟ್ಟವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಲ್ಲಾಕಿನ ಕತ್ತಿಗಳು
Next post ಸಹಕರಿಸಿ ಪ್ಲೀಜ್

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…