ಬಾಳ ಸಂಪಿಗೆ

ಕರುಣೆಯ ಜೊನ್ನವಾಗಿ ತಾ
ಸುರಿವುದು ತುಂಬಲು ಇಳೆಯ ಅಂಗಳ
ಪಾವನಗೊಳಿಸಲೆಂದೇನೆ
ನಿಂತಿದೆ ಮೂರ್ತಿಯು ಪರಮಮಂಗಳ

ಮಳೆಬೆಳೆ ಎಲ್ಲ ಅವನ ದಯೆ
ರವಿಶಶಿ ಎಲ್ಲರು ಅವನ ರೂಪವು
ನಿಲಿಸುವ ನೆತ್ತಿ ವಿಶ್ವವನು
ತಣಿವುದು ಜೀವಿಯ ಘೋರ ತಾಪವು

ದಿವ್ಯನು ಪರಮ ಪುರುಷನವ
ಆತನೆ ನಮ್ಮಯ ಬಾಳಿಗಾಸರ
ಆತನ ಕೃಪೆಯೆ ಕಾಯುವದು
ಎಲ್ಲರ ಯಾತಕೆ ಭಯವು ಬೇಸರ

ಸ್ಥೈರ್ಯವು ಚಿತ್ರದಲ್ಲಿರಲಿ
ಆತನ ಕೃಪೆಯಲಿ ಇರಲಿ ನಂಬಿಗೆ
ತಾಳ್ಮೆಯು ಕೈಯ ಹಿಡಿದಿರಲಿ
ನಲಿದರಳುವದು ಬಾಳ ಸಂಪಿಗೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೧೯
Next post ರಾವಣಾಂತರಂಗ – ೨೨

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…