ಸಿದ್ದರಾಮನಿಗೆ

ಸಿದ್ದನಿವ ಸಿದ್ದನಿವ
ಸಾಧನೆಯ ಗರ್ಭದಿಂ
ಸಿದ್ಧಿಯನು ಪಡೆದ ಶ್ರೀ ಸಿದ್ದನಿವನು|
ಅಂದು ನಾಡಾಗಿರಲು
ಸಂದೇಹವಾಬೀಡು
ಸಂದೇಹ ನೀಗಿಸಲು ಬಂದ ನಿವನು

ಗೊಂದಲದಿ ಬಿದ್ದವರ
ತಂದೆ, ಕೈ ಹಿಡಿದೆತ್ತಿ
ಮುಂದಕ್ಕೆ ಕರೆತಂದು ಮೇಲೆತ್ತಿದೆ|
ನೂರೆಂಟು ಹೀನಗಳ
ದೂರ ಮಾಡಿದ ಧೀರ
ಬಾರಯ್ಯ, ಬಂದಿಹುದು ಮೊದಲ ಗತಿಯು

ನಿನ್ನ ಕರುಣೆಯೆ ಸಾಕು
ನನ್ನಿ ಪತಿತರ ನೆತ್ತೆ
ಇನ್ನೇನು ಮಾಡಯ್ಯ ನಿನ್ನ ಮನಸು
ಏಕೆ? ಬೇಸರ ಗುರುವೆ?
ನೀ ಕರುಣಿ ತೊಳೆಯದಿರೆ
ಮಾಕರಸಿ, ಗುರುದೇವ ಬೇರೆ ಯಾರು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚು-ಮಳೆ
Next post ರಂಗಣ್ಣನ ಕನಸಿನ ದಿನಗಳು – ೧೫

ಸಣ್ಣ ಕತೆ

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…