ಓ ದೇವಿ ಭಾರತಿಯೆ

ಓ ದೇವಿ ಭಾರತೀಯೆ
ನಮಿಸುವೆವು ನಿನಗೆ ||

ಧವಳಗಿರಿ ಹಿಮಾಲಯ
ಶುಭ್ರಹಾಸನ ರುದ್ರ ವೀಣೆ
ನಿನ್ನ ನಗೆ ಚೇತನ
ನವನವೀನತೆಯ ವಿನೂತನ ||

ಹೃತ್ಪೂರ್‍ವಕ ಹೃಮ್ಮಾನಕ
ನವ ವಿಶಾಲ ಹೃದಯ ಸಾಮ್ರಾಜ್ಞಿ
ನಿನ್ನ ಚರಣಕೆ ನಮ್ಮ ನಮನ
ಪರಮ ಪಾವನೆ ಧನ್ಯ ಜೀವನ ||

ನೂಪೂರಗಳೆ ಝೇಂಕಾರವಾಗಿ
ಗತಕಾಲವೆ ವೈಭವವಾಗಿ
ಪಂಚ ಭೂತಗಳಿ ಗಾನವಾಗಿ
ನುಡಿಸುವ ನಿನ್ನ ನಾದವೇ ನವೋದಯ
ನವೋದಯವಾಗಲಿ ನಮ್ಮ ಜೀವನ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಷಯ ಸುಖ ಅಸಡ್ಡೆ
Next post ಕೊಂಬೆ

ಸಣ್ಣ ಕತೆ

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…