ಜನನಿ

ಜನನಿ
ಜಗನ್ಮಾತೆಯೆ
ಜನ್ಮದಾತೆಯೇ ಜಗದಾತ್ರೆಯೆ || ಜ ||

ನಿನ್ನ ಮಡಿಲಲ್ಲಿರಿಸಿ
ನಮ್ಮ ಕಂಬನಿಯನ್ನೊರಿಸಿ
ನಿನ್ನ ಅಪ್ಪುಗೆಯಲಿ
ನಮ್ಮನು ನಲಿಸುವೆ || ಜ ||

ಸುಂದರ ಕನಸುಗಳ ನೀಡಿ
ಮಲ್ಲಿಗೆಯ ಹಾಸುಗೆಯ ಹಾಸಿ
ನಮ್ಮ ನೀ ಜೋಗುಳ ಆಡಿಸುವೆ || ಜ ||

ನೂರು ಕಷ್ಟಗಳ ಹೊತ್ತು
ಸುಖದಿ ನಮ್ಮಯ ಸಲುಹುವೆ
ಜಗದ ಮಕ್ಕಳ ನಗಿಸುವೆ || ಜ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವ್ಯಾಕುಲತೆಯ ಜಪ
Next post ದುರಂತ

ಸಣ್ಣ ಕತೆ

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…