ಗಾಂಧೀ ತಾತ

ಮಕ್ಕಳೆಲ್ಲಾ ಬನ್ನಿರೆಲ್ಲಾ
ಒಂದಾಗಿ ಹಾಡುವ
ಗಾಂಧಿತಾತ ನಮ್ಮ ತಾತ
ಎಂದು ಹಾಡಿ ನೆಲಿಯುವ || ಮೇ ||

ಸ್ವಾತಂತ್ರ್ಯವನ್ನು ತರಲು
ದೇಶಕ್ಕಾಗಿ ದುಡಿದರು
ದಕ್ಷತೆಯಲ್ಲಿ ನೆರವ ನೀಡಿ
ಅಹಿಂಸೆಯ ಮಂತ್ರ ಸಾರಿದರು || ಮ ||

ಸತ್ಯದಲ್ಲೆ ನಡೆದ ಗಾಂಧಿ
ಹಿಂಸೆ ಬೇಡವೆಂದರು
ಜಾತಿ ಭೇದ ತೊರೆದು
ಒಂದೇ ಭಾವವೆಂದರು || ಮ ||

ತ್ಯಾಗ ಶೀಲ ಯೋಗ ನಿರತ
ಚರಕವನ್ನೇ ಹಿಡಿದರು
ಜನತೆಯಲ್ಲಿ ಅರಿವ ನೀಡಿ
ಸದ್ಭಾವನೆಯ ಬೆಳೆದರು || ಮ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿನಗಾಗಿ ಏನು!
Next post ಈ ಹೊತ್ತು

ಸಣ್ಣ ಕತೆ

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…