ಬೆಳಗಾಗುವ ತನಕ ಕುಳಿತುನೋಡು ನಿನ್ನೊಳಗೆ ||ಪ||

ಬಲು ವಿಷಯಗಳಾ ಬಲಿಸೆ ತನುತ್ರಯದೊಳಗೆ
ಹೊರಗೆ ಸುಳಿದಾಡುವ ಮನವೆ               ||೧||

ಕಣ್ಣು ಮುಚ್ಚಿ ಕೈ ಕಾಲುಗಳಾಡದೆ
ತಣ್ಣಗೆ ಪವಡಿಸಿ ಕುನ್ನಿಯ ಮನವೆ        ||೨||

ನಿದ್ರೆ ಹತ್ತಿ ಮಲಗಿರ್ದು ಕನಸಿನೊಳು
ಗದ್ದಲಿಸುವ ಗುಣನೋಡಿ ಮನವೆ            ||೩||

ಘೋರ ಚಿಂತಾಸಾಗರದೊಳು ಮುಳುಗಿ
ಪಾರಗಾಣದ ಛೀಮಾರಿ ಮನವೆ               ||೪||

ವಸುಧಿಪ ಶಿಶುನಾಳಧೀಶನ ಸ್ಮರಣೆಯ
ಎಸಗದೆ ಬಲು ಹರಿದಾಡುವ ಮನವೆ         ||೫||

****