ಆಹಾ ಅಮೃತ ಸಮಯ ಸುಮಧುರ

ಅಹಾ ಅಮೃತ ಸಮಯ ಸುಮಧುರ
ವಿಮಲ ಮಿಲನಕೆ ಅನುಪಮ
ದೇವ ಮಿಲನಕೆ ಮೂಲ ವತನಕೆ
ಉತ್ತಮೋತ್ತಮ ಸಂಭ್ರಮ

ಗಗನ ಸೂರ್‍ಯರು ಮುಗಿಲ ಬಾಗಿಲು
ತೆಗೆವ ಮುನ್ನವೆ ಏಳುವ
ಜ್ಞಾನ ಸೂರ್‍ಯನು ವತನ ಬಾಗಿಲು
ತೆರೆವ ಕಾಲಕೆ ತಲುಪುವೆ

ಕಾಳ ರಾತ್ರಿಯ ಮೋಡ ಸರಿದಿದೆ
ಕಲ್ಪವೃಕ್ಷವು ನಲಿದಿದೆ
ಮುಗಿಲಿನಾಚೆಗೆ ಆತ್ಮಪಕ್ಷಿಯ
ಮಧುರ ಗಾನವು ಕೇಳಿದೆ

ಶಾಂತಿ ಸಾಗರ ಪ್ರೀತಿ ಸಾಗರ
ಶಿವನ ಕಿರಣವ ಕುಡಿಯುವೆ
ಜ್ಞಾನ ಸಾಗರ ಪ್ರೇಮ ಸಾಗರ
ರಾಮನಗರಿಯ ಸೇರುವೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾಲ್ಯ
Next post ಆಧುನಿಕ ಕೃಷಿಯನಂತೆ ವೈಜ್ಞಾನಿಕವೆಂದೊಡೆಂತು?

ಸಣ್ಣ ಕತೆ

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…