ಸದಾ ಖುಶಿಯಲಿ

ಸದಾ ಖುಶಿಯಲಿ ನಗೆಯ ಹೊನಲಲಿ
ಚಂದ್ರಮಂಚವ ತೂಗೋಣ
ಸದಾಶಿವನನು ಹಾಡಿ ಕುಣಿಯುತ
ಮಧುರ ಮಿಲನವ ಪಡೆಯೋಣ

ಏನೆ ಆಗಲಿ ಏನೆ ಹೋಗಲಿ
ಆದುದೆಲ್ಲವು ಒಳಿತಿಗೆ
ಏನೆ ದೊರಕಲಿ ಏನೆ ಕಳೆಯಲಿ
ನಡೆದುದೆಲ್ಲವು ಗುರುವಿಗೆ

ಯಾರು ನಮಗೆ ಏನೆ ಅಂದರು
ಪ್ರಭುವಿಗರ್‍ಪಿತ ಶಿವಶಿವಾ
ಖುಶಿಯು ಹೋದರೆ ಸಕಲ ನಾಶವು
ಇದೇ ಸೂತ್ರವು ಗುರುಶಿವಾ

ಖುಶಿಯೆ ಔಷಧಿ ಖುಶಿಯೆ ಅಮೃತ
ಖುಶಿಯ ರಸದಲಿ ಈಜೋಣ
ಮನುಜ ಲೋಕಕೆ ಖುಶಿಯ ಮಂತ್ರವ
ಸುಖದ ಸೂತ್ರವ ಸಾರೋಣ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಧುರಗಾನ
Next post ಜಂಗಮ ಜಡವಾದೊಡನ್ನ ಸಂಭ್ರಮ ಸಾಧ್ಯವೇ?

ಸಣ್ಣ ಕತೆ

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…