ನಿನ್ನ ನೆನಪು ಕಂಪು ತಂಪು

ನಿನ್ನ ನೆನಪು ಕಂಪು ತಂಪು
ಪ್ರೀತಿ ತಳಿರ ತೋರಣಾ
ಹಗಲು ಸಂಪು ಇರುಳು ಇಂಪು
ಚಂದ್ರ ತಾರೆ ಪ್ರೇರಣಾ

ನಿನ್ನ ಮರೆತು ಬದುಕಲೆಂತು
ಎದೆಯ ಪಟಲ ತೆರೆದೆನು
ನಿನ್ನ ವಿರಹ ತಾಳಲೆಂತು
ಕಣ್ಣ ನೀರ ಕುಡಿದೆನು

ನೀನೆ ನನ್ನ ಹಾಲು ಬೆಲ್ಲಾ
ನೀನೆ ಶಾಂತಿ ಸಾಗರಾ
ನೀನೆ ಪ್ರೀತಿ ರೀತಿ ನೀತಿ
ನೀನೆ ಮೌನದಾಗರಾ

ಹೆತ್ತ ತಾಯಿ ತಂದೆ ನೀನೆ
ನನಗೆ ನೀನೆ ಜೀವನಾ
ನನ್ನ ಪ್ರಾಣ ಸಖನು ನೀನೆ
ಪೂರ್ಣಚಂದ್ರ ಚಾರಣಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೊಸೆಗೊಂದು ಕಾಲ
Next post ಆರೆಂದರೀ ಸಾವಯವದೊಳೆಲ್ಲ ಬರಿ ಲಾಭವೆಂದೆನುತ?

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…