Home / ಕವನ / ಕವಿತೆ / ಮೊಟ್ಮೊದಲು

ಮೊಟ್ಮೊದಲು

ನನಗೂನೆ ಯೆಂಡಕ್ಕು ಬಲಬಲೆ ದೋಸ್ತಿ.
ಕುಡದ್ ಬುಟ್ಟಾಗ್ ಆಡೋದು ನಂಗ್ ಪೂರ ಜಾಸ್ತಿ.
ನಂಗ್ ಎಸರು ಯೋಳ್ತಾರೆ-ರ್ರರ್ರರ್ರರ್ರರ್ರತ್ನ.
ನಾನ್ ಆಡೋ ಪದಗೋಳು ಯೆಂಡದ್ ಪ್ರಯತ್ನ. ೧

ಮಾಬಾರ್‍ತ ಬರೆಯಾಕೆ ಯಾಸಂಗ್ ಇನಾಯ್ಕ
ಸಿಕ್ದಂಗೆ ನಂಗ್ ಒಬ್ಬ ಬೇವಾರ್‍ಸಿನಾಯ್ಕ
ಸಿಕ್ದೋನೆ, ನನ್ ಆಡ್ನ ಕೂಡಿಸ್ದ ಬರ್‍ದು.
ಯೇನ್ ಐತೊ ಯಾರ್ ಬಲ್ರು ಔಂಗ್ ಇರೊ ದರ್‍ದು! ೨

‘ಬರಕೊಂಡ್ರೆ ಬರಕೊಂಡ್ ಓಗ್, ನಿಂಗೂನೆ ಐಲು;
ಆದಷ್ಟೂ ಮಾಡಾನೆ ಸಾಯ ನಂಕೈಲು’
ಅಂದ್ಯಂಡ್ ಔನ್ ಬರದಿದ್ನ ಅಚ್ಗ್ ಆಕೋಕ್ ಒಪ್ಪಿ
ಕಳಿಸಿವ್ನಿ. ಬೋದೀರ ನನಗೇನ್ರ ತೊಪ್ಪಿ! ೩

ಅಕ್ಸಾರ ಗಿಕ್ಸಾರ ನನಗೇನೂ ಬರ್‍ದು.
(ದೊಡ್ ಚಾಕ್ರಿ ಬೇಕಂದ್ರೆ ಓದ್‍ಬೇಕು ದರ್‍ದು!)
ಪದಗೋಳು ಚಂದ್ ಇದ್ರ ಯೆಂಡಕ್ ಸಿಪಾರ್‍ಸಿ!
ಚಂದಾಗ್ ಇಲ್ದಿದ್ರನಕ ತೊಪ್ಗೆ ಬೇವಾರ್‍ಸಿ! ೪
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...