ಎಲ್ಲಿ ನೋಡಿದರಲ್ಲಿ ರೈತ ಬವಣೆಗಳು ನೂರು
ಬೆಳೆಯದಾವುದಾದರು ಈರುಳ್ಳಿ ಸುಲಿದ ನೀರು
ಕೊಳತ ಟೊಮೇಟೋದೀಪರಿಗೆ ಬಂದೀತು ಕಾರು (ವಾಂತಿ)
ಹೇಳಿ ಕೇಳಿ ಕಲ್ಪವೃಕ್ಷವೆಂದವರ ಆಸೆಗಳು ಚೂರು
ಮೊಳೆತೆನ್ನಾರಂಭದಾಶಯಕೆಲ್ಲಿಹುದು ನೀರು – ವಿಜ್ಞಾನೇಶ್ವರಾ
*****