ಈಚೀಚೆ…

ಈಗೀಗ ನನ್ನಲ್ಲಿ….
ಕೋಗಿಲೆ ಹಾಡುವುದಿಲ್ಲ
ಹೂವು ಅರಳುವುದಿಲ್ಲ
ಶ್ರಾವಣ ಸುಳಿಯುವುದಿಲ್ಲ

ಈಗೀಗ ನನ್ನಲ್ಲಿ….
ಬೆಳುದಿಂಗಳು ಕಾಣುವುದಿಲ್ಲ
ತಂಗಾಳಿ ಸುಳಿಯುವುದಿಲ್ಲ
ಚಂದ್ರತಾರೆ ಹೊಳೆಯುವುದಿಲ್ಲ

ಈಗೀಗ ನನ್ನಲ್ಲಿ….
ಹಾಡು ಹುಟ್ಟುವುದಿಲ್ಲ
ಹುಟ್ಟಿದರದು ಹಾಡಲ್ಲ
ಹಾಡಾದರೂ ಅದು ನಿಜವಲ್ಲ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಷಚಕ್ರ
Next post ಹಳೆಯ ನಾಣ್ಯ

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…