ರತ್ನನ್ ಯೋಚ್ನೆ

ಬಯಸಿದ್ ಸಾಮಾನ್ ಬೇಕಾದಂಗೆ
ಇರಲಿ ಇಲ್ದೇನ್ ಇರಲಿ-
ತಾಪತ್ರೇಯನಕ್ ತಪ್ಪಿದ್ದಲ್ಲ!
ಸುಳ್ಳಂತ್ ಅನ್ನೌನ್ ಬರಲಿ! ೧

ಬುಂಡೇಲ್ ಒಂದ್ ತೊಟ್ ಇರೊಗಂಟ್ಲೂನೆ
ನಿದ್ದೆ ಗಿದ್ದೆ ಬರದು!
ಬುಂಡೇ ಕಾಲಿ ಆಗೋದ್ರನಕ
ನಿದ್ದೆ ಬರಲೇ ಬರದು! ೨

ಈ ತಾಪತ್ರೇನ್ ತಳ್ಳಾಕಾಕೆ
ಏನ್ ಮಾಡ್ಬೇಕೊ ಕಾಣೆ!
ಯೋಚಿಸ್ದಸ್ಟು ತಗಲ್ಕೋಂತೈತ್ ಆ
ಯೋಚ್ನೇಗ್ ಒಂದ್ ಒಸ್ ಸಾಣೆ! ೩

ಬಯಸಿದ್ ಸಾಮಾನ್ ಬೇಕಾದಂಗೆ
ಇರಲಿ ಇಲ್ದೇನ್ ಇರಲಿ-
ತಾಪತ್ರೆಯನಕ್ ತಪ್ಪಿದ್ದಲ್ಲ!
ಸುಳ್ಳಂತ್ ಅನ್ನೌನ್ ಬರಲಿ! ೪
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರುಳು
Next post ಎಚ್.ವಿ. ಸಾವಿತ್ರಮ್ಮ ಅವರ ಕತೆಗಳು

ಸಣ್ಣ ಕತೆ

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…