ಆಯ್ದಯ್ದರನಿತಯ್ದುತಯ್ದಿತಾ ಕಾಲಂ

ಅಯ್ದಯ್ದರನಿತಯ್ದು ತಯ್ದಿತಾ ಕಾಲಂ
ನಿನ್ನ ನಿನ್ನವರಂದು ನನಗಿತ್ತ ದಿನದಿಂ;
ವಿಧಿ ನಿನ್ನ ತುಡುಕಲಿಂದೆನ್ನ ಬಾಳ್ತನದಿಂ
ಕತ್ತಲಿಸಿತೊಡನೆ ಮುಂದಣ ಚಕ್ರವಾಲಂ! ೪

ನಿನಗಾದುದಿಲ್ಲ ನಾ, ನೀನೆ ನನಗಾದೆ-
ನನ್ನ ಕೆಯ್ವಿಡಿದೆ ನೀನಳಲನನುಭವಿಸೆ!
ನಿನ್ನ ಚೆಲುವಲಿ ಪಿಪಾಸೆಯನೆನ್ನ ತವಿಸೆ
ನಿನ್ನೆದೆಯನನ್ಯ ಪ್ರೇಮವನರಿಯದಾದೆ! ೮

ಇನ್ನಾದರೆನ್ನೆದೆಗೆ ಪ್ರೇಮದಾ ಭಿಕ್ಷೆ
ಯನ್ನೀಯೆ – ನೀನಲ್ಲದಾರೀವರೆನಗೆ?
ನಿನ್ನ ಪ್ರೇಮದಲಿ ನನಗಾಜೀವ ದೀಕ್ಷೆ
ಯನ್ನೀಡ, ಬಾರೆದೆಗೆ, ಬಾ ನಿನ್ನ ಮನೆಗೆ! ೧೨
ನಿನ್ನ ಮುಡಿಗಿಡುವೆನೀ ಕಂಬನಿಯ ಮೊಲ್ಲೆ
ಯೆನ್ನೆದೆಯ ಮೀಸಲಂ, ತಳೆಯಿದಂ ನಲ್ಲೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರ್‍ಣಾಟಕ ಸೀಮೆಯಾಗೆ…
Next post ಕಲಾಂ ಹೀಗಿದ್ದರು

ಸಣ್ಣ ಕತೆ

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…