ಪಂಡಿತರು ಶಾಸ್ತ್ರಿಗಳು ಸೂಕ್ಷ್ಮ ಚತುರತೆಯಿಂದೆ
ಚರ್‍ಚಿಸಿಹರುಭಯಲೋಕಗಳ ಮರುಮಗಳ;
ಅವರ ಪಾಡೇನಾಯ್ತು? ಉಳಿದರಂತವರೆಲ್ಲ,
ಮಣ್ಣು ಬಾಯನು ಮುಚ್ಚೆ, ಸೋತು ಮಲಗಿದರು.
*****