ಋತದ ಮೊದಲ ಕಣಸು

ಸೃಷ್ಟಿ ಸ್ವಯಂಪ್ರಭೆಯಗುಹೆಯ ದಾರಿಗನಾಗಿ
ಚೇತನಂ ನಡೆಯುತಿರೆ, ವಿಸ್ಮಯಂಗೊಳಿಸಿತಿದ
ನೂತನದ ನಸುಕೊಂದು ಒಂದೆಡೆಯೊಳ್ ; ಅದರಿಂದ
ಸ್ಪಷ್ಟ ಮಂದದಕಾಯ್ತು ಅಹಮಸ್ಮಿ ಎಂಬರಿವು.

ನಾನುಂಟು’ ಎನ್ನುತಿದು ಹಿಗ್ಗಿ ಕಣ್ಮನ ತೆರೆಯ-
ಲೆನಿತು ಭಯಮಾಯ್ತದಕೆ ಇಹದ ರಚನೆಯ ಕಂಡು!
ಘೃಣೆಯಿರದ ಮಿತಿಯಿರದ ತದ್ಛಿನ್ನ ಬಹುವಿನೊಳು
ಏನೆಡರ ಕಂಡಿತಿದು ತನ್ನ ಬಾಳನು ನಡಸೆ!

ಇಂತು ದುಃಖಿತದೇಹಿ ತತ್ತ್ವರಯುದಯವನು
ಮೊಟ್ಟಮೊದಲೀಕ್ಷಿಸುತ, ಋತದ ಶ್ರುತಿಯೊಳು ನಡೆವ
ವ್ಯಷ್ಟಿ ವಿವಿಧ ಸ್ವರಗಳುದ್ಗೀಥವಾಲಿಸುತ,
ಎಂತು ನನೆಕೊನೆವೋಯ್ತೊ ಆ ಸುಪ್ರಭಾತದೊಳು!

ಎಂತು ದನಿಗೂಡಿಸಿತೊ ಸೋಹಮೋಂ ಸೋಹಮೆಂದು
ಎಂತು ಭಯ ನೀಗಿತೋ ನಂದಮಾನಂದಮೆಂದು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೀನನ ಹಾಡು
Next post ಒಬ್ಬನೆಂದರೊಬ್ಬನೇ

ಸಣ್ಣ ಕತೆ

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…