ಕವಿಶಿಷ್ಯ

ಕವಿಗಳಿಗೆ ಗುರುವು ತಾನೆಂಬ ಗರುವಿಕೆಯ ಮರು-
ಭೂಮಿಯ ಮರೀಚಿಕಾಜಲಪಾನಲೋಲನಾ-
ಗುವನು ಅರೆಗಳಿಗೆ, ಬಿಡಿಕರಡುಗವಿತೆಯ ಮೊದಲ
ಒಂದೆರಡು ಸಾಲುಗಳ ಲೀಲೆಯಲಿ ಬರೆದ ಬಡ-
ಗಬ್ಬಿಗನು ಕೂಡ; ಸ್ವಕಪೋಲಕಲ್ಪಿತದ ಕೀ-
ರ್‍ತಿಯ ಪ್ರತಿಧ್ವನಿಯು ತುಂಬುವದು ಕಿವಿಗವಿಯನ್ನು,
ತನ್ನ ಕೈ ಹಿಡಿವರಾರಿನ್ನು ಇಳೆಯೊಳಗೆನುತ
ಸರಸತಿಯೆ ಕೈಪಿಡಿದ ಕನಸ ಕಾಣುವನಹಹ!

ಸುಕವಿ ಜನಮಿತ್ರ; ನವ ಕವನಕ್ಕೆ ರನ್ನಗ-
ನ್ನಡಿ; ರಸಿಕ; ಸರಸಿಗಳ ಮಧ್ಯದಲಿ ಸರಸಿ; ಮು-
ಪ್ಪಿನಲಿ ಹರೆಯದ ಹಸಿರ, ಹಸುಳೆತನದಾಚಿಗುರ
ಕುಣಿಕುಣಿಸಿ ಕುಣಿದು ಕುಣಿಸಿದ ಮೂರ್‍ತಿವೆತ್ತ ತೆಂ-
ಗಾಳಿ; ನೀ ಬಂದೆ-ಹಾ, ಪೋದೆ ! ಸಾರಿದೆ ಜಗಕೆ :
ಕವಿಶಿಷ್ಯನೆಂಬುವಾ ಕೀರ್‍ತಿ ಕವಿಗೂ ಮೇಲು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗೋಪಾಳಭಟ್ಟರ ಹುಲಿ
Next post ಮುನಿಯನ್ ಬೋಣಿ

ಸಣ್ಣ ಕತೆ

 • ಏಡಿರಾಜ

  ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

 • ಹೃದಯ ವೀಣೆ ಮಿಡಿಯೆ….

  ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

 • ಮುಗ್ಧ

  ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

 • ಪ್ರೇಮನಗರಿಯಲ್ಲಿ ಮದುವೆ

  ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

 • ವಿಷಚಕ್ರ

  "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

cheap jordans|wholesale air max|wholesale jordans|wholesale jewelry|wholesale jerseys