ನಿಲುವಂಗಿ

ನನ್ನ ಹಾಡಿಗದೊಂದು ನಿಲುವಂಗಿ ಹೊಲಿದೆ
ಹಳೆಪುರಾಣವ ಬಳಸಿ
ಬುಡದಿಂದ ತುದಿಗೆ,
ಹೊಲಿದೆ ಬಣ್ಣದ ಜರಿಕಸೂತಿ ಹೆಣಿಗೆ.
ಯಾರೋ ಪೆದ್ದರು
ನಿಲುವಂಗಿ ಕದ್ದರು,
ತಮ್ಮದೇ ಎನ್ನುವಂತೆ ಅದ ತೊಟ್ಟು ಮೆರೆದರು
ಲೋಕದೆದುರು;
ಚಿಂತಿಲ್ಲ ಹಾಡೇ, ತೊಡಲಿ ಅವರೇ,
ಬೆತ್ತಲೆ ನಡೆವ ಕೆಚ್ಚೆ ಹೆಚ್ಚಿನದು ಅಲ್ಲವೇ?
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಐರ್‌ಲೆಂಡಿನ ಪುರಾಣಕಥೆಗಳನ್ನು ಬಳಸಿಕೊಂಡು ಏಟ್ಸ್ ಅನೇಕ ಕವನಗಳನ್ನು ಬರೆದ. ಬೇರೆ ಕವಿಗಳು ನಾಚಿಕೆಗೇಡನ್ನುವ ರೀತಿಯಲ್ಲಿ ಅದನ್ನು ಅನುಕರಿಸತೊಡಗಿದರು. ಇನ್ನು ಅಂಥ ಅಲಂಕಾರಾತ್ಮಕ ಶೈಲಿಯನ್ನು ಬಳಸದೆ ದಿಟ್ಟವಾದ, ಪ್ರಾಮಾಣಿಕವಾದ, ಹೆಚ್ಚು ನೇರವಾದ ಶೈಲಿಯಲ್ಲಿ ಬರೆಯುವುದಾಗಿ ಕವಿ ಹೇಳುತ್ತಾನೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವೃಕ್ಷಾಲಾಪ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೫೨

ಸಣ್ಣ ಕತೆ

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…