ಕಂದರಗಳು ತೆರೆದಿವೆ!

ಪ್ರಿಯ ಸಖಿ,
ಇತ್ತೀಚಿನ ಮಾಧ್ಯಮಗಳು ಎಷ್ಟು ಶಕ್ತಿಯುತವಾಗಿವೆಯೆಂದರೆ ಅವು ಪ್ರಪಂಚವನ್ನು ಹತ್ತಿರವಾಗಿಸಿವೆ ಎನ್ನುತ್ತಾರೆ. ಇದು ವ್ಯವಹಾರದ ಮಾತಾಯ್ತು. ಆದರೆ ಮಾನವನ ಮನಸ್ಸು? ಮನಸ್ಸುಗಳುಹತ್ತಿರವಾಗಿವೆಯೆ ? ಕವಿ ಜಿ. ಎಸ್. ಶಿವರುದ್ರಪ್ಪನವರು ವಿಷಾದದಿಂದ ಹೀಗೆ ಹೇಳುತ್ತಾರೆ.
ಎದೆ ಎದೆಗಳ
ನಡುವೆ ಇರುವ
ಸೇತುವೆಗಳು ಮುರಿದಿವೆ
ಭಯ, ಸಂಶಯ, ತಲ್ಲಣಗಳ
ಕಂದರಗಳು ತೆರೆದಿವೆ!

ಹೌದಲ್ಲವೇ ಸಖೀ ಇತ್ತೀಚೆಗೆ ಎಲ್ಲಾ ಸಂಬಂಧಗಳಲ್ಲೂ ಎಂತದೋ ಒಂದು ನಾಟಕೀಯತೆಯನ್ನು ಕಾಣುತ್ತಿದ್ದೇವೆ. ಇದು ಭಾವಪೂರ್ಣ, ಹೃದಯದಾಳದಿಂದ
ಬಂದ ಸಂವೇದನೆ ಎನ್ನಿಸುವುದೇ ಇಲ್ಲ. ಎಲ್ಲದರಲ್ಲಿಯೂ ಕೃತ್ರಿಮತೆ, ತೋರಿಕೆಯ ಆತ್ಮೀಯತೆ ಎದ್ದುಕಾಣುತ್ತದೆ. ಮನಸ್ಸು ಗೊಂದಲದಲ್ಲಿ ಸಿಲುಕಿ ಎಷ್ಟು
ಭಯಭೀತಗೊಂಡಿದೆಯೆಂದರೆ ಅದರಲ್ಲಿ ಸದಾ ಸಂಶಯ, ತಲ್ಲಣಗಳು ಧವಧವಿಸುತ್ತಿರುತ್ತವೆ. ಯಾರಮೇಲೆಯೂ ನಂಬಿಕೆ ಇಲ್ಲ. ಸ್ವತಹ ತನ್ನ ಮೇಲೂ ನ೦ಬಿಕೆ ಇಲ್ಲ. ಕವನವನ್ನು ಮು೦ದುವರೆಸುತ್ತಾ ಕವಿ
ಮುಖ ಮುಖವೂ
ಮುಖವಾಡವ
ತೊಟ್ಟುನಿಂತ ಹಾಗಿವೆ
ಆಡುತಿರುವ ಮಾತಿನೊಳಗೆ
ಹೃದಯ ಕಾಣದಾಗಿದೆ !

ಎನ್ನುತ್ತಾರೆ, ಇದೆಲ್ಲಾ ಪ್ರಾರಂಭವಾದದ್ದಾದರೂ ಎಲ್ಲಿಂದಾ ? ಮನಸ್ಸುಗಳ ಮಧ್ಯೆ ಮುರಿದು ಬಿದ್ದಿರುವ ಸೇತುವೆಗಳನ್ನು ಇನ್ನಾದರೂ ಸರಿಪಡಿಸಬೇಕಲ್ಲವೇ ಸಖಿ ? ವ್ಯಕ್ತಿ – ವ್ಯಕ್ತಿಯ ನಡುವಿನ ನಂಬಿಕೆಗಳು ಉಳಿಯಬೇಕಾದರೆ, ಉಳಿದು ಬೆಳೆಯಬೇಕಾದರೆ ವ್ಯಕ್ತಿ ಮೊದಲು ಪ್ರಾಮಾಣಿಕನಾಗಬೇಕು. ಅವನು ತೊಟ್ಟ ಎಲ್ಲ ಮುಖವಾಡಗಳನ್ನೂ ಕಿತ್ತೂಗೆದು, ನಿಜದ ಮುಖದೊಂದಿಗೆ ಮುಖಾಮುಖಿ ನಿಲ್ಲಬೇಕು. ಗೆಲ್ಲಬೇಕು. ಆಗಲೇ ಇತರರ ಮೇಲೆಯೂ ನಂಬಿಕೆ ಮೂಡೀತು! ಸೇತುವೆಗಳು ಎದ್ದೀತು! ಅಲ್ಲವೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾರಯ್ಯ
Next post ಪ್ರತ್ಯಕ್ಷ ದೇವರು

ಸಣ್ಣ ಕತೆ

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…