ರುಚಿಯದೆಲ್ಲಿಹುದು? ಬಿಸಿ ಕಾಫಿಯೊಳೇ?
ಕಚಗುಳಿಯಯಿಸ್‌ಕ್ರೀಮಿನೊಳೇ? ದುಡಿದುಣುವ
ಹಚ್ಚ ಹಸಿವಿನೊಳೇ? ದುಡಿಮೆ ಕಷ್ಟವೆಂದೊಡಾ
ರುಚಿಯನುಚ್ಛ ನೀಚೋಷ್ಣತೆಗೇರಿಸಲಿಳಿಸಲು
ಹಚ್ಚ ಹಸಿರಿಂಗೆಷ್ಟು ಕಷ್ಟವಿಹುದೆಂದರಿತಿಹಿರಾ ? – ವಿಜ್ಞಾನೇಶ್ವರಾ
*****