ನಿಮ್ಮೊಡನಿದ್ದೂ ನಿಮ್ಮಂತಾಗದೇ ?

ಪ್ರಿಯ ಸಖಿ,
ಬಾಹ್ಯಶಕ್ತಿಗಳು ಪ್ರಬಲ ವ್ಯಕ್ತಿತ್ವಗಳನ್ನು ತಮ್ಮದಾಗಿಸಿಕೊಳ್ಳಲು ಹೆಣಗುವಾಗಲೆಲ್ಲಾ ನನಗೆ ನೆನಪಾಗುವುದು ಕವಿ ಕೆ. ಎಸ್. ನಿಸಾರ್ ಅಹಮದ್ ಅವರ ‘ನಿಮ್ಮೊಡನಿದ್ದೂ ನಿಮ್ಮಂತಾಗದೇ’ ಎಂಬ ಕವನದ ಸಾಲುಗಳು.

ನಿಮ್ಮೊಡನಿದ್ದೂ ನಿಮ್ಮಂತಾಗದೆ
ಜಗ್ಗಿದ ಕಡೆ ಬಾಗದೆ
ನಾನು ನಾನೇ ಆಗಿ, ಈ ನೆಲದಲ್ಲೇ ಬೇರೂತ್ತಿದರೂ ಬೀಗಿ
ಪರಕೀಯನಾಗಿ
ತಲೆಯೆತ್ತುವುದಿದೆ ನೋಡಿ
ಅದು ಬಲುಕಷ್ಟದ ಕೆಲಸ.

ಹೌದಲ್ಲವೇ ಸಖೀ, ವ್ಯಕ್ತಿತ್ವಗಳಿಗೆ ಪ್ರಲೋಭನೆಗಳನ್ನೊಡ್ಡುವವು ಸಮಾಜ, ಧರ್ಮ, ಸರ್ಕಾರ, ಸಿದ್ಧಾಂತಗಳು, ತರ್ಕಗಳು ……… ಇತ್ಯಾದಿ ಹಲವಾರು.  ಅವುಗಳಿಲ್ಲದಿದ್ದರೆ ಬದುಕು ಸಾಗದಿದ್ದರೂ, ಅವುಗಳ ಜೊತೆಯೇ ಬದುಕಬೇಕಿರುವುದು ಅನಿವಾರ್ಯವಾದರೂ ಅವುಗಳೆಲ್ಲದರ ಹಿಡಿತದಿಂದ ಬಿಡಿಸಿಕೊಂಡು ತಮ್ಮದೇ ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಳ್ಳುವುದು ಎಷ್ಟು ಕಷ್ಟದ ಕೆಲಸ ಅಲ್ಲವೇ?  ಆದರೆ ಅಸಾಧ್ಯವೇನಲ್ಲ!

ಆಂಗ್ಲ ಕವಿ ಬ್ರೌನಿಂಗ್ ಹೀಗೆ ಹೇಳುತ್ತಾನೆ “Best be yourself, imperial. Plain and true’ ನಿನಗೆ ನೀನಾಗಿರುವುದು ನೀನೇ ಸಾರ್ವಭೌಮನಾಗಿರುವುದು, ನಿನಗೆ ನೀನು ಸತ್ಯವಾಗಿರುವುದು, ನಿಷ್ಕಪಟವಾಗಿರುವುದು ಉತ್ತಮವಾದುದು
ಎಂದು.  ಹಾಗಾದಾಗ ಯಾವ ಪ್ರಲೋಭನೆಗೆ ಏಕೆ ಮಣಿಯಬೇಕು?

ತಾವರೆಯ ಎಲೆಗೆ ನೀರಿನಲ್ಲಿರುವುದು ಅನಿವಾರ್ಯ. ಆದರೆ ಬೇರುಗಳು, ಎಲ್ಲಾ ಸಾರ ಇರುವುದೂ ನೀರಿನಲ್ಲೇ, ಆದರೆ ಸಾರ ಹೀರಿಯೇ ಬೆಳೆದರೂ ತಾವರೆಯ ಎಲೆ
ತನ್ನದೇ ಸಮರ್ಥ, ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಂಡು ಬೆಳೆದು ತನ್ನ ಮೇಲೆ ಬಿದ್ದ ನೀರಹನಿಯ ಒತ್ತಡಕ್ಕೆ ಮಣಿಯದೇ ಅಂದರೆ ಒದ್ದೆಯೂ ಆಗದೇ, ಮುಳುಗಿಯೂ ಹೋಗದೆ ‘ಇದ್ದೂ ಇಲ್ಲದಂತೆ’ ಇದ್ದರೂ ತನ್ನ ಅಸ್ತಿತ್ವ ಉಳಿಸಿಕೊಳ್ಳುವಂತೆ ನಾವಾಗಬೇಕು. ಎಲ್ಲ ಪ್ರಲೋಭನೆಗಳಿಗೆ ಒಡ್ಡಿಕೊಂಡರೂ, ಅದರ ಸಾರವಷ್ಟೇ ಹೀರಿ ಇದರಲ್ಲೇ (ವ್ಯವಸ್ಥೆಯಲ್ಲೇ) ಇದ್ದೂ, ಇದರಲ್ಲೇ ಬೆಳೆದು, ನಮ್ಮೆದೇ ಪ್ರತ್ಯೇಕ ವ್ಯಕ್ತಿತ್ವ ರೂಪಿಸಿಕೊಳ್ಳುವುದು ನಿಜಕ್ಕೂ ಒಂದು ಚಾಲೆಂಜ್ ಅಲ್ಲವೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿನ್ನೊಲುಮೆ
Next post ದಾರಿ ಬಿಡಿ

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…