ಎಲ್ಲ ರೋಗದ ಮೂಲ ಮಾಲಿನ್ಯವೆಲ್ಲಿಹುದು ಗೊತ್ತಾ?

ಮೂಲ ಪ್ರಕೃತಿಯನಾಂತು ನೋಡಿದೊಡರಿಯುವುದು
ಶಾಲ್ಯ ಧಾನ್ಯಗಳೆಮಗಲ್ಲ, ಹಕ್ಕಿಗಳಾಹಾರವದು
ಸುಲಿದಂತುಣಲಪ್ಪ ಹಣ್ಣುಗಳೆಮ್ಮ ಪಾಲಿನದು
ಹುಲ್ಲೆಯನುಣುವ ಹುಲಿಯೆಂದು ಹುಲ್ಲುಣದು
ಮಲಬದ್ಧತೆಯ ಪೇಟೆ ಬೆಳೆದಿಹುದೀ ಕಾರಣದಿ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರೆಯಾಲೇನೇ?
Next post ಧ್ಯಾನಕ್ಕೆ ಹುಡುಕಾಟವೇಕೆ?

ಸಣ್ಣ ಕತೆ

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…