ಪೋಕ್ರಾನ್

ಭೂಮಡಿಲ ಉದರದೊಳಗೆ
ಗರ್ಜಿಸಿದ ಕಂಪನಕೆ
ಶಾಂತಿ ಸಂದೇಶ ಹೊತ್ತ ಪಾರಿವಾಳ
ಬಾಯಾರಿಕೆಯಲಿ ಬಳಲಿತು

ಬುದ್ಧನ ನಾಡಿನಲಿ
ಪೋಕ್ರಾನ್ ಅಣುಸಿಡಿದಾಗ
ಕುಳಿತಲ್ಲೆ ಮುಗುಚಿದ ಬುದ್ಧ
ನಸುನಗುತ್ತಲೆ ಮೌನಿಯಾದ

ಜಗಕ್ಕೆಲ್ಲಾ ಶಾಂತಿ ಸಾರುವ
ಅಹಿಂಸೆಗಳ ಆರಾಧಕ ಒಡಲು
ಹಿಂಸೆಯ ತಾಂಡವಕೆ ತಲ್ಲಣಿಸುತ
ಭರತಖಂಡ ಭಗ್ನಗೊಂಡು ಬರಡಾಯಿತು

ಸಿಡಿದ ಭೂಮಡಿಲ ಒಡಲು
ಬಾಯಾರಿ ಧಗೆಯಲಿ ದಹಿಸುತಿಹುದು
ಹಸಿರೆಲ್ಲಾ ಕೊಸರಿ… ಬಿರುಕಲಿ
ಬಂಜೆತನದಿ… ಬಳಲುತಿಹದು

***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೪೧
Next post ವೈಟ್‌ಫೀಲ್ಡ್

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…