ಕಂಡೆ ಕಂಡೆ ನಿನ್ನ ಕಂಡೆ

ಕಂಡೆ ಕಂಡೆ ನಿನ್ನ ಕಂಡೆ
ಕಂಡುಕೊಂಡೆ ಮಧುವನಾ
ನೀನೆ ರಥವು ಪ್ರೀತಿ ಪಥವು
ಶಾಂತಿವನದ ಉಪವನಾ

ಬೆಳಕು ಕಂಡೆ ಭಾಗ್ಯ ಕಂಡೆ
ಕಳೆದ ಗಂಟು ದೊರಕಿದೆ
ಶಿಖರದಿಂದ ಶಿಖರಕೇರಿ
ಶಿವನ ಮುಕುರ ಸೇರಿದೆ

ನನ್ನ ತಂದೆ ಜಗದ ತಂದೆ
ಯುಗದ ತ೦ದೆ ಹಾಡಿದಾ
ನನ್ನ ಗುಣವ ಮನದ ಕಣವ
ಹಬ್ಬಮಾಡಿ ಹೊಗಳಿದಾ

ಶಾಂತಿವನದಿ ಸಂತಿ ಇಲ್ಲ
ಚಿಂತಿ ದೂರ ಮಾಡಿದಾ
ಮಧುರ ಮಾತು ಪ್ರೀತಿ ನೀಡಿ
ಜ್ಞಾನ ಶಿಖರ ತೋರಿದಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭಕ್ತಿಯ ಸಾಮಾಜಿಕತೆ

ಸಣ್ಣ ಕತೆ

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…