ನಂ ಮುನಿಯಂದು ಜರ್‍ಬು

ಯಿಂದೆ ಲೋಟ್ದಾಗ್ ನೀರ್ ಇಟ್ಕೊಂಡಿ
‘ಚೂ ಮಂತ್ರಾ’ಂದ ಏಸು!
ಇಟ್ ನೀರೆಲ್ಲ ಯೆಂಡ್ ಆಗೋಯ್ತು!
ಅದು ಕೆಲಸ! ಬೇಸು! ೧

ಮಾತ್ಗೇಳ್ತೀನಿ- ಯಿಂದಿನ್ ಕಾಲ್ದಾಗ್
ಎಂತೆಂತೋರ್ ಇದ್ರಂತ!
ಈಗ್ಲು ಔರೆ-ದೊಡ್ ಪಡಕಾನೆ
ಇಟ್ಟಾಕ್ಸ್ನೇನೆ ಬಂತ! ೨

ಕಾಲಿ ನೀರ್‍ನ ಯೆಂಡ ಮಾಡ್ದ್ರೆ
ಏಸು ಕಿರ್‍ಸ್ತ ಪರ್‍ಬು-
ಪಕ್ಕ ಯೆಂಡಾನ್ ನೀರ್ ಮಾಡಾದು
ನಂ ಮುನ್ಯಂದು ಜರ್‍ಬು! ೩

ಯೋಳಿಸ್ಕೊಳ್ದೆ ತಿಳಕೊಳ್ಳೋರ್‍ಗೆ
ಯೋಳ್ದ್ರಾರ್ ಏನಾರ್ ಉಂಟು;
ಉಗದ್ ಅಂದ್ರೂನೆ ತಿಳಕೊಳ್ದೊರ್‍ದು-
ದಾರಕಿಂತ್ ಎಚ್ಗೆ ಗಂಟು! ೪
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸತ್ಯಸಂಕಲ್ಪ
Next post ಜಾತಿ ಬಗ್ಗೆ ಅನಂತಮೂರ್‍ತಿ

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…