ಶ್ರೀನಾರಾಯಣ

ಸ್ಫೂರ್‍ತಿಯ ಮೂರ್‍ತಿಗೊಂಡಂತೆ ಕಂಡವು ಆನೆ ಕುದುರೆ ಹಾ-
ವುಗೆ, ನಿನ್ನ ಹೊಸ್ತಿಲವ ದಾಟಿ ಇಲ್ಲಡಿಯಿಟ್ಟೆ;
ಬಿಜಯ ಮಾಡಿಸಿದೆ ವೈಭವದಿ, ದಿಗ್ವಿಜಯ ಮಾ-
ಡುವೆ, ಕುರುಹಗಳ ತೋರಿ ಹೇಳುತಿಹೆಯಾ, ನಲ್ಲ!
ನನಸೆಂದು ತೋರಿ ಹಾರೈಸಿದುದು ಕನಸಾಗೆ,
ಕನಸು ಕನ್ನಡಿಯ ಗಂಟೆಂದೆನಲೊ, ಕಣಸೆಂದು
ಹಿಗ್ಗಿ ನುಗ್ಗಲೊ, ಜೀವ ತಾನಪೂರ್‍ವವ ಕಂಡು
ಸಂಕೋಚ ವಿಸ್ತಾರದಲ್ಲಿ ತೇಂಕಾಡುವದು.

ನೇತ್ರ ಪಲ್ಲವಿಗೆ ಭುಲ್ಲಯಿಸಿರುವ ಮುಗ್ಧ ಮಾ-
ಧುರ್‍ಯವೇ! ಕನ್ನಿಕೆಯ ಕಾಲುಂದುಗೆಯ ಅಂದ-
ದೊಳು ಕುಣಿಸದಿರು ಬಗೆಯ; ನಲ್ಲ ನಿನ್ನೊಳಗೆ ಅನು-
ರಾಗಿಯಿರಬಹುದು, ನಿನ್ನನು ಹುಡುಕಿ ನಾಳೆ ಬರ-
ಬಹುದು, ಬಹನು. ಅರಸನ ಕಂಡ ಪುರುಷನ ಮರೆತೆ
ನೋಡು. ಕಾಮಿನಿಯೆ! ಅಡಿಯಾಗು, ವಾಹನವಾಗು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೃಷ್ಟಿ ಇರೆ ದಾರಿ
Next post ಯೆಂಡಕ್ಕ್ ತರಪ್ಣ

ಸಣ್ಣ ಕತೆ

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…