ಸುಳಿದೊಡೆದು ಹುಳಿದೊಡೆದು ದಿಟ್ಟಿ

ಸುಳಿದೊಡೆದೂ ದಿಟ್ಟಿ ಹೆಽರುಽಗಾಽಗಽಲೀಽಽ ತಾನಾ
ದಿಟ್ಟಿ ಹೇರುಗಾಗಲಿ ಹಡೆದಳೇ ತಾಯೀ || ೧ ||

ಹೋದರ್ ಬಂದರ ದಿಟ್ಟಿ ವಽಲಽಗಾಗಲೀ ತಂದಾ ತಾನಾ
ಆಚೆಮನೆ ಲಕ್ಕದಿರು ಇಚೆಮನೆ ತಂಗದೀರು ಓಡೋಡಿ ಬನ್ನೀರೋ || ೨ ||

ನಮ್ಮ ತಂಗೀ ಬಂದಾದಂದಿ ಹಾನಾ ತನ್ನಿರೋ
ಹಾನ ತನ್ನೀರಮ್ಮ ಬೋಕಳ ತನ್ನೀರೋ || ೩ ||

ಯಂದೆ ಬಳ್ಗೀರವಾ ಹಿಂದೆ ಚಲ್ಲೀರವಾ
ಕೋಲು ರನ್ನದಾ ಕೋಲೇ || ೪ ||
*****

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಲ್ಲಿ – ೪
Next post ಏನದಾತುರವೋ ಯಮನ ಮನೆಯೆಡೆಗೆ?

ಸಣ್ಣ ಕತೆ

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…