ನವಲ ಕಂಡೀರಾ ನವಲ

ನವಲ ಕಂಡೀರಾ ನಮ್ಮ ನವಲ ಕಂಡೀರ್‍ಯಾ?
ಕಡಲೀಯಾ ಹೊಲದಾಗ ಇತ್ತ ನಮ್ಮ ನವಲು || ೧ ||

ನವಲ ಕಂಡೀರ್‍ಯಾ ನಮ್ಮ ನವಲ ಕಂಡೀರ್‍ಯಾ?
ಗೋದಿಯಾ ಹೊಲದಾಗ ಇತ್ತ ನಮ್ಮ ನವಲು
ನವಲ ಕಂಡೀರಾ ನಮ್ಮ ನವಲ ಕಂಡೀರ್‍ಯಾ ? || ೨ ||

ರಾಗೀಯ ಹೊಲದಾಗ ಇತ್ತ ನಮ್ಮ ನವಲು
ನವಲ ಕಂಡೀರಾ ನಮ್ಮ ನವಲ ಕಂಡೀರ್‍ಯಾ || ೩ ||

ಜೋಳಾದ ಹೊಲದಾಗ ಇತ್ತ ನಮ್ಮ ನವಲ
ನವಲ ಕಂಡೀರಾ ನಮ್ಮ ನವಲ ಕಂಡೀರ್‍ಯಾ ? || ೪ ||
*****
ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಲ್ಲಿ – ೧೭

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…