ಸಾಹಿತ್ಯ-ಕೇಳಿ

ತಂತಾನೆ ತಣಿವಿನಲ್ಲಿದ್ದ ತಲ್ಲೀನತೆಯು
ನಿದ್ದೆ ತಿಳಿದೆದ್ದಾಗ ಎನಿತೆನಿತು ಶಾಂತಿ!
ಬಾಯಿಲ್ಲದನುಭವದ ನೆನವೆ ನನೆಕೊನೆಹೋಗಿ
ಕನಸೇ ನನಸಾಗಿರಲದೆಂಥ ನವ ಕಾಂತಿ!

ಆಟವೇ ಹಿಗ್ಗು? ಒಡನಾಟವೇ ಹಿರಿ ಹಿಗ್ಗು
ನೋಟದ ವಿಲಾಸವೇ ಗುಡಿಕಟ್ಟಿದಂತಿದೆ.
ಒಂದು ಹಿಗ್ಗಿನ ಪಲ್ಲ, ಹಲವು ನುಡಿಯಲಿ ಹರಿಯೆ
ಆಟಪಾಟದ ಹಾಡು ಕಳಸವಿಟ್ಟಂತೆ!

ವಾಣಿ ವೀಣಾರವಕೆ ಇವಳು ತಂಗಿ;
ಗಂಗೆ ಇಳೆಗಿಳಿವಂತೆ ಇವಳ ಭಂಗಿ;
ಇಲ್ಲಿಲ್ಲ ನಾಡಾಡಿ ಹಾಡುಗಬ್ಬ;
ಒಳಬಗೆಯ ಹಿಗ್ಗಿಗಿದು ಹುಟ್ಟುಹಬ್ಬ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೀಕ್ಷೆ
Next post ನಂಜೀ ಯೆಸರು

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…