ದಬ್ಬಾಳಿಕೆಗೆ – ೧

ನೆತ್ತಿಗೇರಿದ ಕಣ್ಣ ಕುರುಡು ದಬ್ಬಾಳಿಕೆಯೆ!
ಪೊಳ್ಳು ಬಿಂಕದ ಮೂಗ ಮೇಲೆಮಾಡಿ,
ಹಿಂಬರಿಕೆಯಡಿಯಲ್ಲಿ ಸಿಕ್ಕು ತೊತ್ತಳಿಗೊಂಡು
ಸಾವವರ ನರಳಿಕೆಯ ಕಿವುಡಗೇಳಿ,

ಇಲ್ಲಿಯೂ ಅಲ್ಲಿಯ ಕೊನೆಗಾಣದಾಸೆಗಳ
ಅಂತರ ಪಿಶಾಚಿಯೇ! ತಣಿಸಲೆಳಸಿ
ರಕ್ಷಕನು ಎಂದು ತಿಳಕೊಂಡ ರಾಕ್ಷಸನು ನೀನು,
ನಿನ್ನ ಕರುಳನು ತಿಂದುಕೊಂಡ ಕರುಣಿ!

ಕ್ಷಮೆಗು ನಿನಗೂ ಜಾತಿವೈರವಿಹುದಲ್ಲ!
ನ್ಯಾಯ ನೀತಿಗಳೆರಡು ನಿನ್ನವೇ ಅಲ್ಲ!
ಪ್ರಳಯತಾಂಡವದ ಪ್ರತಿನಿಧಿಯು ನೀನೇನು?
ನರಕಯಾತನೆಯ ಮಾನಸಪುತ್ರ ನೀನು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಜ್ಞೆ

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…