ಆಗ-ಈಗ

ಯಿಂದೆ ನಾ ಕುಡದ್ ಮೋರೀಗ್ ಬಿದ್ದಿ
ಬೆಳಗೀಗ್ ಒಂಬತ್ ಗಂಟೇಗ್ ಎದ್ದಿ
ಎಂಗೆಂಗೋನೆ ಆಟೀಗ್ ಬಂದ್ರೆ
ಏನ್ ಕಾಣಿಸ್ತೂಂತ್ ಅಂತಿ-
ಅರ್ದಿದ್ ಬಲೇನ್ ಒಲಿಯೋ ಜಾಡನ್
ನೋಡ್ತಿದ್ಲ್ ಎಡ್ತಿ ಕುಂತಿ! ೧
* * *

ಜೀತ ಮುಗಿಸ್ಕೊಂಡ್ ಈಗ್ ನಾ ನೆಟ್ಗೆ
ಅಟ್ಟೀಗ್ ಬತ್ತಂದ್ರ್ ಒಂದೇ ಏಟ್ಗೆ
ಚಿಗರಿ ಚಿಗದಂಗ್ ನನ್ ಪುಟ್ನಂಜಿ
ಬಂದ್ರ್, ಎಂಗಾಯ್ತೈತ್ ಅಂತಿ?
ಬಂದ್ ಔಳ್ ನಿಂತಾಗ್ ಎದೆಗೊಳ್ ಆಡ್ತವ್-
ಎಳ್ಡಕ್ ಒಂದೇ ತಂತಿ! ೨
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಗಮ್ಯ
Next post ಪ್ರಚೋದನೆ – ಅತ್ಯಾಚಾರ ಮತ್ತು ಕಾನೂನು ಕ್ರಮ

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…