ಮನಸು-ಮೆಯ್ಯಿ

ಕಣಜ ಕಾಳು ಎಳ್ಡೂ ಕೂಡ್ದಾಗ್
ಅಲ್ವ ಆಕೋದ್ ಬರ್‍ತಿ?
ಮನಸು ಮೆಯ್ಯಿ ಎಳ್ಡೂ ಸೇರ್‍ಕೊಂಡ್ರ್
ಆಗ್ಲೇ ಪ್ರೀತಿ ಪೂರ್‍ತಿ! ೧

ಮನಸು ಮೆಯ್ಯಿ ಮುತ್ಕೊಟ್ಟಂಗಿತ್!
ಸೌಂದ್ರ ಆರ್‍ದ ಮಾರ್‍ತಿ!
ಒಂದಿದ್ರ್ ಇನ್ನೊಂದ್ ಇಲ್ದೌರಂದ್ರೆ-
ಬಂಡಿ ಇಲ್ಲದ್ ಸಾರ್‍ತಿ! ೨

ಮುತ್ತ್ ಕೊಟ್ಟಂಗ್ ಆ ಮನಸೂ ಮೆಯ್ಯೂ
ಲಗತ್ತಾಗ್ ಇಲ್ದಿದ್ರ್ ಎಕ್ಕ!
ಯಾವ್ದೊಂದ್ ಇಲ್ದಿದ್ರೂನೆ ಮಿಕ್ಕಿದ್
ಇದ್ದೂ ಇಲ್ಲದ್ ಲೆಕ್ಕ! ೩
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಂಬನಿ
Next post ಸಹನೆಯೇ ಸ್ತ್ರಿ ಅರಿವು

ಸಣ್ಣ ಕತೆ

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ದೇವರ ನಾಡಿನಲಿ

    ೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…