ಮಡಿಕೇರೀಲಿ ಮಂಜು

ಬೂಮೀನ್ ತಬ್ಬಿದ್ ಮೋಡ್ ಇದ್ದಂಗೆ
ಬೆಳ್ಳಿ ಬಳಿದಿದ್ ರೋಡ್ ಇದ್ದಂಗೆ
ಸಾಫಾಗ್ ಅಳ್ಳ ತಿಟ್ಟಿಲ್ದಂಗೆ
ಮಡಿಕೇರೀಲಿ ಮಂಜು!
ಮಡಗಿದ್ ಅಲ್ಲೇ ಮಡಗಿದ್ದಂಗೆ
ಲಂಗರ್ ಬಿದ್ದಿದ್ ಅಡಗಿದ್ದಂಗೆ
ಸೀತಕ್ ಸಕ್ತಿ ಉಡಗೋದಂಗೆ
ಅಳ್ಳಾಡಾಲ್ದು ಮಂಜು! ೧

ತಾಯಿ ಮೊಗೀನ್ ಎತ್ಕಂಡಂಗೆ
ಒಂದಕ್ಕೊಂದು ಅತ್ಕೊಂಡಂಗೆ
ಮಡಿಕೇರೀನ ಎದೆಗೊತ್ಕೊಂಡಿ
ಜೂಗೀಡ್ಸಿತ್ತು ಮಂಜು!
ಮಲಗಾಕ್ ಸೊಳ್ಳೆ ಪರದೆ ಕಟ್ಟಿ
ಒದಿಯಾಕ್ ಒಗದಿದ್ ದುಪಟಿ ಕೊಟ್ಟಿ
ಪಕ್ದಾಗ್ ಗಂದದ್ ದೂಪ ಆಕ್ದಂಗ್
ಮಡಿಕೇರೀ ಮೇಲ್ ಮಂಜು! ೨

ಮಂಜಿನ ಮಸಕಿನ್ ಕಾವಲ್ನಲ್ಲಿ
ಒಣಗಿದ್ ಉದ್ದಾನೆ ವುಲ್ನಲ್ಲಿ
ಒಳಗೇ ಏನೋ ಸರದೋದಂಗೆ
ಅಲಗಾಡ್ತಿತ್ತು ಮಂಜು!
ನಡಿಯೋ ದೊಡ್ದೊಡ್ ದೇವಲ್ನಂಗೆ
ಪಟ್ಣದ್ ಸುತ್ತಿನ್ ಕಾವಲ್ನಂಗೆ
ಅಲ್ಲಲ್ಲೇನೆ ಅಂಗಂಗೇನೆ
ಗಸ್ತಾಕಿತ್ತು ಮಂಜು! ೩

ಸೂರ್‍ಯನ್ ಕರೆಯೋಕ್ ಬಂದ್ ನಿಂತೋರು
ಕೊಡಗೀನ್ ಎಲ್ಲಾ ಪೂವಮ್ನೋರು
ತೆಳ್ನೆ ಬೆಳ್ನೆ ಬಟ್ಟೇನಾಕಿ
ಬಂದಂಗಿತ್ತು ಮಂಜು!
ಚಿಮ್ತಾನಿದ್ರ್ ಎಳಬಿಸಿಲಿನ್ ಕೆಂಪು
ಮಂಜಿನ್ ಬಣ್ಣ ಕಣ್ಗೆ ತಂಪು!
ಕೊಡಗಿನ್ ಲಸ್ಮೀರ್ ಪೂವಮ್ನೊರ್‍ಗೆ
ಆಲಿನ್ ಸೌಂದ್ರೀ ಮಂಜು! ೪

ಅಗಲೇ ಬರಲಿ ರಾತ್ರೇ ಬರಲಿ
ಬಿಸಲು ನೆಳ್ಳು ಏನೇ ಇರಲಿ
ಕಣ್ಮರೆಯಾಗಾಕ್ ತಾವ್ ಕೊಡಾಲ್ದು
ಮಡಿಕೇರೀಗೆ ಮಂಜು!
ತೈಲ ನೀರಿನ್ ಮೇಗಿದ್ದಂಗೆ
ಪೂವಮ್ಮ-ನನ್ ತಂಗೀದ್ದಂಗೆ
ಬಿಟ್ಟೂ ಬಿಡದಂಗ್ ಇಡಕೋಂತಿತ್ತು
ಮಡಿಕೇರೀಗೆ ಮಂಜು! ೫
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭಾರತದ ಸಂತನ ಕತೆ
Next post ಪ್ರಶ್ನೆ-ಉತ್ತರ

ಸಣ್ಣ ಕತೆ

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…