ದೀರ್‍ಘಮೌನದ ಬಳಿಕ

ಮೂಲ: ವಿಲಿಯಂ ಬಟ್ಲರ್ ಏಟ್ಸ್

ದೀರ್‍ಘಕಾಲದ ಮೌನ ಮುಗಿದು ಮಾತು;
ಬೇರೆ ಪ್ರೇಮಿಗಳು ಸಂಬಂಧ ಕಡಿದೋ, ಮಡಿದೋ
ಇಲ್ಲದಿರುವಾಗ,
ನಿಷ್ಕರುಣಿ ದೀಪಕ್ಕೆ ಕವಿಸಿ ಮರೆಯನ್ನ
ನಿಷ್ಕರುಣಿ ಇರುಳಿಗೆ ಸರಿಸಿ ತೆರೆಯನ್ನ
ಸಂಗೀತ ಕಲೆಗಳ ಉನ್ನತವಸ್ತುವನ್ನ
ನಾವೀಗ ತಿರುತಿರುಗಿ ಹೀಗೆ ಪ್ರಶಂಸಿಸುವುದು ಬಹಳ ಸಹಜ.
ಶಕ್ತಿ ಸೋರಿದ ದೇಹದಲ್ಲಿ ಎಲ್ಲ ವಿವೇಕ;
ಪ್ರಾಯದ ದಿನಗಳಲ್ಲೊ ಪ್ರೀತಿಸಿದ್ದೆವು ಬರಿದೆ
ಯಾವ ಅರಿವೂ ಇರದೆ ಮರುಳರಾಗಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಡುತಾವ ನೆನಪುಗಳು – ೧೫
Next post ಶ್ರುತಿ

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…