ಮಾನವನ ಬಾಳಿನ ನಾಲ್ಕು ಹಂತಗಳು

ಮೂಲ: ವಿಲಿಯಂ ಬಟ್ಲರ್ ಏಟ್ಸ್

ಕಾದಾಟ ನಡೆಸಿದ ದೇಹದೊಡನೆ;
ನೇರ ನಡೆದಿದೆ ದೇಹ, ಗೆದ್ದು ತಾನೇ.

ಹೋರಾಟ ಹೂಡಿದ ಹೃದಯದೊಡನೆ;
ಕಳೆದುಕೊಂಡ ಶಾಂತಿ ಮುಗ್ಧತೆಯನೆ.

ಭಾರಿ ಕಾಳಗವಾಗಿ ಬುದ್ದಿಯ ಜೊತೆ
ಹೆಮ್ಮೆಯ ಹೃದಯ ಈಗ ಗತಿಸಿದ ಕಥೆ.

ದೇವರೊಂದಿಗೆ ಇನ್ನು ಕಾದುತ್ತಾನೆ;
ನಡುರಾತ್ರಿ ಗೆಲ್ಲುವುದು ದೇವರೇನೇ.
*****
ಮಾನವಕುಲದ ಈವರೆಗಿನ ಬಾಳು ಮತ್ತು ಪ್ರತಿವ್ಯಕ್ತಿಯ ಬಾಳು ಎರಡೂ ತಮ್ಮ ತಮ್ಮ ಭಿನ್ನ ಅವಸ್ಥೆಗಳಲ್ಲಿ ಸಾಧಿಸಿದ್ದನ್ನು ಕೊಂಚ ವ್ಯಂಗ್ಯವಾಗಿ ಗಮನಿಸುವ ಪದ್ಯ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಡುತಾವ ನೆನಪುಗಳು – ೧೭

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…