ಪ್ರಚೋದನೆ

ಮೂಲ: ವಿಲಿಯಂ ಬಟ್ಲರ್ ಏಟ್ಸ್

ರೊಚ್ಚು, ಕಾಮದ ಕೆಚ್ಚು ಕಚ್ಚುತ್ತಿರಲು ನನ್ನ
ವೃದ್ಧಾಪ್ಯದಲ್ಲಿ,
ಎಂಥ ಭೀಕರ ಅಂತ ಚಿಂತಿಸುವಿಯೋ ಏನೊ
ನೀನು ಮನದಲ್ಲಿ,
ಅಂಥ ಪೀಡೆಗಳಾಗಿ ಕಾಡಿದ್ದೇನಿಲ್ಲ ಅವು
ತಾರುಣ್ಯದಲ್ಲಿ ನನ್ನನ್ನು;
ಅಲ್ಲದೇ ನನಗೀಗ
ಹಾಡು ಬರೆಯಲು ತಾನೆ ಏನಿದೆ ಪ್ರಚೋದನೆ
ಬಿಟ್ಟರೆ ಅವನ್ನು ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಡುತಾವ ನೆನಪುಗಳು – ೩೦
Next post ಕನ್ನಡ ಕಂದ

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ತಾಯಿ-ಬಂಜೆ

    "ಅಯ್ಯೋ! ಅಮ್ಮ!... ನೋವು... ನೋವು... ಸಂಕಟ.... ಅಮ್ಮ!-" ಒಂದೇ ಸಮನಾಗಿ ನರಳಾಟ. ಹೊಟ್ಟೆಯನ್ನು ಕಡೆಗೋಲಿನಿಂದ ಕಡದಂತಾಗುತ್ತಿತ್ತು. ಈ ಕಲಕಾಟದಿಂದ ನರ ನರವೂ ಕಿತ್ತು ಹೋದಂತಾಗಿ ಮೈಕೈಯೆಲ್ಲಾ ನೋವಿನಿಂದ… Read more…