ಅಮೃತ ಹಸ್ತ

ಭೂಮಿ ಆ ಅಡಿಗಲ್ಲುಗಳನ್ನು ಎಷ್ಟೋ ದಿನಗಳಿಂದ ನೋಡುತ್ತಲೇ ಇತ್ತು.  ಶಾಲೆ, ಹಾಸ್ಟಲ್ಲು, ಆಸ್ಪತ್ರೆ, ಮಾರ್ಕೆಟ್ಟು, ಕಾಂಪ್ಲೆಕ್ಸ್, ಸಮುದಾಯ ಭವನಗಳ ನಿರ್ಮಾಣಕ್ಕೆಂದು ಶಾಸಕರು, ಸಂಸದರು, ಮಂತ್ರಿಗಳು ಸಂಭ್ರಮದಿಂದ ಅನಾವರಣ ಮಾಡಿದ ಅಡಿಗಲ್ಲುಗಳನ್ನು ಭೂಮಿ ಸಂತೋಷದಿಂದಲೇ ಗಮನಿಸಿತ್ತು.  ಆಗೆಲ್ಲಾ ಅತ್ಯಂತ ಉತ್ಸಾಹದಿಂದ ಬೀಗಿಕೊಂಡಿದ್ದ ಅಡಿಗಲ್ಲುಗಳು ದಿನಗಳೆದಂತೆ ಅನಾಥ ಪ್ರಜ್ಞೆಯಿಂದ ನರಳತೊಡಗಿದ್ದವು.

ಋತುಮಾನದ ವೈಪರೀತ್ಯಗಳಿಗೆ ಸಿಕ್ಕು ಕೆಲವು ಅಡಿಗಲ್ಲಗಳು ಸೊರಗಿದ್ದರೆ ಇನ್ನೂ ಕೆಲವು ವಿಧ್ವಂಸಕರ ದಾಳಿಗೆ ಸಿಕ್ಕು ವಿರೂಪಗೊಂಡಿದ್ದವು.  ಅವುಗಳಿಗೆ ಆಧಾರವಾಗಿದ್ದ ಗೋಡೆಗಳು ಕುಸಿದು ಹೋಗಿದ್ದವು.  ಅಸ್ತಿತ್ವಕ್ಕಾಗಿ ಚಡಪಡಿಸುತ್ತ ಅವಶೇಷಗಳಂತೆ ನಿಂತಿರುವ ಅಡಿಗಲ್ಲುಗಳಿಗೆ ದನಕರುಗಳು ಮೈತಿಕ್ಕಿ ತಮ್ಮ ತುರಿಕೆಯನ್ನು ಶಮನಗೊಳಿಸಿಕೊಳ್ಳುತ್ತಿದ್ದವು.  ನಾಯಿಗಳು ಆರಾಮಾಗಿ ಬಂದು ಉಚ್ಚೆ ಹೊಯ್ದರೆ, ಕಾಗೆಗಳು ಮಲ ವಿಸರ್ಜಿಸುತ್ತಿದ್ದವು.

ಅದನ್ನೆಲ್ಲವನ್ನು ಮೌನವಾಗಿ ಅನುಭವಿಸುತ್ತಿರುವ ಅಡಿಗಲ್ಲುಗಳನ್ನು ಕಂಡು ಭೂಮಿ ಒಂದಿನ “ಅಡಿಗಲ್ಲುಗಳೇ, ಏನಿದು ನಿಮ್ಮ ಅವಸ್ಥೆ?  ನಿಮ್ಮ ಸ್ಥಿತಿ ನೋಡಿದರೆ ನನಗೆ ಅಯ್ಯೋ ಅನಿಸುತ್ತದೆ” ಎಂದು ಮರುಕ ವ್ಯಕ್ತಪಡಿಸಿತು.

“ನಮ್ಮ ಹಣೆಯ ಬರಹ ಇದು.  ಎನು ಮಾಡುವುದು?”  ಅಡಿಗಲ್ಲು ತಹತಹಿಸಿದ್ದವು.

“ಬಹಳ ವರ್ಷಗಳ ಹಿಂದೆಯೇ ನೀವು ಭವ್ಯ ಕಟ್ಟಡಗಳ ಭಿತ್ತಿಗಳಲ್ಲಿ ಕಂಗೊಳಿಸಬೇಕಾಗಿತ್ತು.”

“ದೇವರು ನಮಗೆ ಅಂಥ ಭಾಗ್ಯ ನೀಡಲಿಲ್ಲ.”

“ನೀವು ಶಾಸನ ಪ್ರಭುಗಳ ಅಮೃತಹಸ್ತಗಳಿಂದ ಪ್ರತಿಪ್ಠಾಪನೆಗೊಂಡಿದ್ದೀರಿ” ಅಭಿಮಾನ ವ್ಯಕ್ತಪಡಿಸಿತು ಭೂಮಿ.

“ಹೌದು, ನಾವು ಶಾಪಗ್ರಸ್ಥರಾಗಿ ಇಲ್ಲಿ ಬಿದ್ದಿರುವುದಕ್ಕೆ ರಾಜಕಾರಣಿಗಳಮೃತಹಸ್ತಗಳೇ ಕಾರಣ” ನಿಟ್ಟುಸಿರಿದವು ಅಡಿಗಲ್ಲು.

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೧೯
Next post ಅಂತರಂಗ

ಸಣ್ಣ ಕತೆ

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys