ಮುಗಿಲಿನಲಿ ಮಳೆಬಿಲ್ಲ ಕಾಣುತಲೆ ನಾನು
ನೆಗೆದು ಕುಣಿದಾಡುವುದು ಹೃದಯ ತಾನು!
ಅಂತೆ ಇದ್ದುದು ಮೊದಲು ಚಿಕ್ಕಂದಿನಂದು;
ಅಂತೆ ಇಹುದೀ ಮೆರೆವ ಯೌವನದಲಿಂದು,
ಅಂತೆ ಇರಲೆನಗಿನ್ನು ಮುಪ್ಪಿನಲೆ ಮುಂದೆ-
ಅಂತಿರದೆ, ಸಾವು ಬರಲಂದೆ!
ಮನುಜನಿಗೆ ಮಗು ತಂದೆ – ನಾನದನು ಬಗೆದು,
ಹೊಂದಿಸಲು ಬಯಸುವೆನು ದಿನಗಳನ್ನು ತೆಗೆದು
ಒಂದಕೊಂದನು ಪ್ರಕೃತಿಭಕ್ತಿಯಲಿ ಬಿಗಿದು.
*****
WORDSWORTH : Rainbow
















